ಒಗಟುಗಳು। Kannada Ogatugalu With Answer Riddle In Kannada

ಒಗಟುಗಳು। Kannada Ogatugalu With Answer Riddle In Kannada

Kannada Ogatugalu, ಒಗಟುಗಳು, ಒಗಟುಗಳು Ogatugalu In Kannada Riddle In Kannada Kannada Ogatugalu With Answer Kannada Vagatu Riddle in Kannada Ogatu in Kannada ogatu with answer, kannada ogatugalu with answers

Kannada Ogatugalu

ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ-ಬೆಂಕಿ, ಸುಣ್ಣ ಹಚ್ಚಿದ ಹಂಚು, ಹೊಗೆ, ರೊಟ್ಟಿ

ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.-ಕಣ್ಣು.

ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.-ಬೆಣ್ಣೆ ಉಂಡೆ.

ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.-ಅಂಗಿ.

ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ- ಕಣ್ಣು

ಕಾಸಿನ ಕುದುರೆಗೆ ಬಾಲದ ಲಗಾಮು- ಸೂಜಿ ದಾರ

ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ- ಗಿಳಿ

ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?- ಮೂಗು, ಬಾಯಿ

ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?- ಮೊಟ್ಟೆ

ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?- ಕೋಳಿ

ಒಗಟುಗಳು। Kannada Ogatugalu With Answer Riddle In Kannada
ಒಗಟುಗಳು। Kannada Ogatugalu With Answer Riddle In Kannada

ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?- ರೈಲು

ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ- ಗಡಿಯಾರ

ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ- ಕಲ್ಲಂಗಡಿ ಹಣ್ಣು

ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು

ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು

ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ

ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ

ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.

ಮೋಟು ಗೋಡೆ ಮೇಲೆ, ದೀಪ ಉರೀತಿದೆ.- ಮೂಗುಬೊಟ್ಟು

ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.-ನೆರಳು

ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ-ಗಾಣ

ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ

ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ

ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ-ತಂಬೂರಿ

ಒಗಟುಗಳು। Kannada Ogatugalu With Answer Riddle In Kannada

ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ-ಕಪ್ಪೆ

ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ

ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು

ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?-ನಕ್ಷೆ

ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.- ಅನ್ನದ ಅಗುಳು.

ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.-ಸಾಬೂನು.

ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.

ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.-ನೀರು

ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.-ಎಣ್ಣೆ ದೀಪ.

ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.-ಬಾಳೆ ಹಣ್ಣು.

ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.-ಕನ್ನಡಿ

ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ ಮುಳ್ಳು.

ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.-ಕಮಲ.

ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.-ಗಿರಣಿ

ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.-ದುಡ್ಡು.

ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.-ಸಗಣಿ.

ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.- ಗರಗಸ.

ಕಡ್ಲೆ ಕಾಳಷ್ಟು ಹಿಂಡಿ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.-ಹಲ್ಲುಪುಡಿ.

ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.-ಗಡಿಗೆಮಜ್ಜಿಗೆ.

ಒಗಟುಗಳು। Kannada Ogatugalu With Answer Riddle In Kannada

ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .-ರೊಟ್ಟಿ, ದೋಸೆ

ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು

ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ

ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.

ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.-ನದಿ

ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.- ಕೋಳಿ

ಇತರೆ ವಿಷಯಗಳು

ವಿಭಕ್ತಿ ಪ್ರತ್ಯಯಗಳು ಕನ್ನಡ

ಕನ್ನಡ ಕಾಗುಣಿತ

ಕನ್ನಡ ಸಮಾಸಗಳು

ಕನ್ನಡ ಪತ್ರ ಲೇಖನಗಳು

ಇತರೆ ಪ್ರಬಂಧ ವಿಷಯಗಳು

Leave a Reply

Your email address will not be published. Required fields are marked *